ಬೆಂಗಳೂರು: ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆಯಲ್ಲಿ ಅಪಘಾತವೊಂದರಲ್ಲಿ ಯುವಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಯುವಕ ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸ್ಕೂಟರಿನಿಂದ ಬಿದ್ದ ಯುವಕ ಅಲ್ಲೇ ಪ್ರಜ್ಷಾಹೀನನಾಗಿದ್ದ. ಜೊತೆಗಾರ ಅಲ್ಲಿಂದ ಎಸ್ಕೇಪ್ ಆಗಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಈ ಅಪಘಾತವಾಗಿದೆ ಎಂದು ಹುಡುಗನ ಮನೆಯವರು ಆರೋಪಿಸಿದ್ದರು.
ಖಾಸಗಿ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಗಾಯಗೊಂಡ ಯುವಕ 19 ವರ್ಷದ ಕೌಶಿಕ್ನ ಮಿದುಳು ಅಪಘಾತದ ವೇಳೆ ತಲೆಗೆ ತೀವ್ರ ಪೆಟ್ಟಾಗಿ ಮೆದುಳು ನಿಷ್ಕ್ರೀಯವಾಗಿದೆಯೆಂದು ವೈದ್ಯರು ತಿಳಿಸಿದ್ದರು.


