Site icon PowerTV

ಸರ್ಕಾರ ನಿದ್ರಾವಸ್ಥೆಯಲ್ಲಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಇವತ್ತು ನಿದ್ರೆ ಮಾಡುತ್ತಿರುವ ಸರ್ಕಾರ ಇದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಷ್ಟೇ ಸಾರಿ ಸಮಸ್ಯೆಗಳನ್ನ ಸರ್ಕಾರದ ಗಮನಕ್ಕೆ ತಂದರು ಕೂಡ ಸರ್ಕಾರ ಸ್ಪಂದಿಸುತ್ತಿಲ್ಲ. ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಪ್ರವಾಹ, ಅತಿವೃಷ್ಟಿ ಹಾಗೂ ಬರ ರಾಜ್ಯವನ್ನು ಕಾಡ್ತಾ ಇದೆ. 2019 ರಲ್ಲಿ ಬಿಎಸ್ ವೈ ಸಿಎಂ ಆದ ವೇಳೆ ಅಂತೂ ದೊಡ್ಡ ಪ್ರವಾಹ ಬಂತು. 31 ಜಿಲ್ಲೆಗಳ ಪೈಕಿ 21 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿ ಹಾನಿಯಾಗಿದೆ.

31 ಲಕ್ಷ ಎಕರೆ ಪ್ರದೇಶದಲ್ಲಿನ ಬೆಳೆ ನಷ್ಟ ಆಗಿದೆ. ಶೇಕಡಾ 75% ಬೆಳೆ ಹಾನಿಯಾಗಿದೆ. ಭತ್ತ ರಾಗಿ ಶೇಂಗಾ ಹಾನಿಯಾಗಿವೆ. ನಮ್ಮ ಸರ್ಕಾರ ಇದ್ದಾಗ ಪ್ರವಾಹ ಹಾಗೂ ಬರ ಬಂದ ವೇಳೆ ನಾವು ಪರಿಹಾರ ನೀಡಿದ್ದೇವೆ ಎಂದು ಸಿದ್ದರಾಮಯ್ಯ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version