Site icon PowerTV

ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ : ಸಿಎಂ ಬೊಮ್ಮಾಯಿ

ರಾಜ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಾರಣಾಸಿಗೆ ಭೇಟಿ ನೀಡಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಜತೆ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸಭೆ ಫಲಪ್ರದವಾಗಿತ್ತು ಎಂದು ಹೇಳಿದರು. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಬಹುದಾದ ಕೆಲವು ಹೊಸ ಅಭಿವೃದ್ಧಿ ಯೋಜನೆಗಳ ಬಗ್ಗೆ ಬೆಳಕು ಚೆಲ್ಲಲಾಯಿತು ಎಂದು ಮಾಹಿತಿ ನೀಡಿದರು.

Exit mobile version