Site icon PowerTV

ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ : ಡಿ.ಕೆ.ಶಿವಕುಮಾರ್

ಬೆಳಗಾವಿ : ಕುಂದಾನಗರಿಯಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಪ್ರತಿಪಕ್ಷವಾದ ಕಾಂಗ್ರೆಸ್ ಭಾರೀ ಪ್ರತಿಭಟನೆ, ರ್‍ಯಾಲಿ​ ನಡೆಸುತ್ತಿದ್ದು ಅಧಿವೇಶನಕ್ಕೆ (belagavi legislative winter session) ಕಾವೇರಿಸಿದೆ.

ಪ್ರತಿಭಟನೆಯ ಭರದಲ್ಲಿ ಇಂದು ಕಾಂಗ್ರೆಸ್​ ಪಕ್ಷದ ಎಲ್ಲಾ ಶಾಸಕರೂ ಸೇರಿದಂತೆ ಸಾವಿರಾರು ಮಂದಿ ಒಗ್ಗೂಡಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ರ್‍ಯಾಲಿ ಆರಂಭಕ್ಕೂ ಮುನ್ನ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಹಾಗೂ ಬಿಜೆಪಿಯದ್ದು ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದವರು ಪ್ರತಿ ಹಂತದಲ್ಲಿಯೂ ಲಂಚ ಪಡೆಯುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಕೂಡ ಕಮಿಷನ್ ಪಡೆಯುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ನಮ್ಮ ಸರ್ಕಾರದ ವಿರುದ್ಧ 10 ಪರ್ಸೆಂಟ್ ಸರ್ಕಾರ ಆರೋಪಿಸಿದ್ದರು. ಹೀಗಾಗಿ ಕಮಿಷನ್ ಆರೋಪದ ಬಗ್ಗೆ ತನಿಖೆಯಾಗಬೇಕು. ನಮ್ಮ ಸರ್ಕಾರದಿಂದ ಈವರೆಗಿನ ಆರೋಪದ ಬಗ್ಗೆಯೂ ತನಿಖೆ ಆಗಲಿ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

Exit mobile version