Site icon PowerTV

ಮಂತ್ರಿಗಳ ವಿರುದ್ಧ ಶಾಸಕರ ಆಕ್ರೋಶ

ಬೆಳಗಾವಿ : ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ವಿರುದ್ಧ ಸ್ವಪಕ್ಷದ ಸದಸ್ಯರು ಆಕ್ರೋಶವನ್ನು ಹೊರಹಾಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಶಾಸಕರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದರು. ಈ ವೇಳೆ ಸಚಿವರ ನಡವಳಿಕೆ ಸರಿಪಡಿಸಿಕೊಳ್ಳುವಂತೆ ಹೇಳಿದರು.

ಆಡಳಿತ ಪಕ್ಷದ ಶಾಸಕರ ಜೊತೆ ಸರಿಯಾಗಿ ನಡೆದುಕೊಳ್ಳಿ. ಕಾರ್ಯಕರ್ತರಿಂದ ನಾವು ಶಾಸಕರಾಗಿರೋದು, ನಮ್ಮಿಂದ ನೀವು ಸಚಿವರಾಗಿರೋದು. ನಡವಳಿಕೆ ಸರಿಪಡಿಸಿಕೊಳ್ಳದಿದ್ದರೇ ಬಹಿರಂಗವಾಗಿಯೇ ತಿರುಗಿಬೀಳಬೇಕಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತ್ನಾಳ್, ರೇಣುಕಾಚಾರ್ಯ ಮಾತನಾಡುವಾಗ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಮೌನವಾಗಿಯೇ ಕುಳಿತಿದ್ದರು.

ಇದೇ ವೇಳೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ 50 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದರು. 50 ಕೋಟಿ ಸಾಕಾಗಲ್ಲ. 100 ಕೋಟಿ ನೀಡಿ ಎಂದು ಶಾಸಕರು ಪಟ್ಟು ಹಿಡಿದರು. ಅಲ್ಲದೇ ಎಸ್‍ಸಿ, ಎಸ್‍ಟಿ ಅನುದಾನ ಕಡಿತ ಮಾಡಬೇಡಿ ಎಂದು ಆಗ್ರಹಿಸಿದರು.

ಹಾಗೂ ಜೆಡಿಎಸ್-ಕಾಂಗ್ರೆಸ್ ಸರ್ಕಾರದಲ್ಲಿದ್ದ ಅಧಿಕಾರಿಗಳನ್ನು ಬದಲಿಸಿ ಅಂತಲೂ ಹೇಳಿದರು. ಸಭೆಯಲ್ಲಿ ಕೆಲ ಶಾಸಕರಿಂದ ಅಧಿಕಾರಿಗಳ ಬದಲಾವಣೆಗೆ ಆಗ್ರಹ ಕೇಳಿಬಂದಿತು.

Exit mobile version