Site icon PowerTV

ಮತಾಂತರ ನಿಷೇಧ ಕಾಯ್ದೆ ಬೇಡ : ಮಾಜಿ ಸಿಎಂ ಹೆಚ್​ಡಿಕೆ

ಉದ್ದೇಶಿತ ಮತಾಂತರ ನಿಷೇಧ ವಿಧೇಯಕಕ್ಕೆ ಜೆಡಿಎಸ್‌ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಅಗತ್ಯವಿಲ್ಲದ ಮತಾಂತರ ನಿಷೇಧ ವಿಧೇಯಕದ ಬಗ್ಗೆ ಅಲ್ಲ.

ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ವಿರೋಧ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು. ಗುತ್ತಿಗೆದಾರರಿಂದ 40% ಕಮಿಷನ್‌ ವಸೂಲಿ ಮಾಡುವ ಬಗ್ಗೆ ಜೆಡಿಎಸ್‌ ಮಾತನಾಡುತ್ತಿಲ್ಲ ಎನ್ನುವ ಆರೋಪವನ್ನು ತಳ್ಳಿಹಾಕಿದ ಅವರು, ಗುತ್ತಿಗೆದಾರರ ಸಂಘದ ಒಬ್ಬರು ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರ ಇಟ್ಟುಕೊಂಡು ಕಾಂಗ್ರೆಸ್‌ ನಾಯಕರು 40% ಕಮಿಷನ್‌ ಅಂತ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಖಂಡಿತ ಇಲ್ಲ” ಎಂದು ಎಚ್‌.ಡಿ. ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.

Exit mobile version