Site icon PowerTV

ಭಾರತೀಯ ಚೆಲುವೆ ಜೊತೆ ಮ್ಯಾಕ್ಸ್​ವೆಲ್ ಮದುವೆ

ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಶೀಘ್ರದಲ್ಲೇ ಭಾರತದ ಅಳಿಯನಾಗಲಿದ್ದಾರೆ. ಇದನ್ನು ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಭಾರತೀಯ ಮೂಲದ ಗೆಳತಿ ವಿನಿ ರಾಮನ್ ಬಹಿರಂಗಪಡಿಸಿದ್ದಾರೆ. ಮುಂದಿನ ವರ್ಷ ಮ್ಯಾಕ್ಸ್‌ವೆಲ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಾಗಿ ಆಡುತ್ತಾರೆ.

ಗ್ಲೆನ್ ಮ್ಯಾಕ್ಸ್‌ವೆಲ್  ಕಳೆದ ವರ್ಷ ಭಾರತೀಯ ಮೂಲದ ಗೆಳತಿ ವಿನಿ ರಾಮನ್ ಅವರೊಂದಿಗೆ ಭಾರತೀಯ ಸಂಪ್ರದಾಯಗಳ ಪ್ರಕಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಅವರಿಬ್ಬರ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದವು. ವಿನಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಮ್ಯಾಕ್ಸ್‌ವೆಲ್ ಜೊತೆಗಿನ ಅನೇಕ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ.

2019 ರಲ್ಲಿ, ಮಾನಸಿಕ ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದ ಮ್ಯಾಕ್ಸ್‌ವೆಲ್ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಮತ್ತೆ ಅವರನ್ನು ಸಹಜ ಸ್ಥಿತಿಗೆ ಮರಳುವಂತೆ ಮಾಡಿರುವುದರಲ್ಲಿ ವಿನ್ನಿ ಪಾತ್ರ ಬಹಳಷ್ಟಿದೆ ಅಂತ ಸ್ವತಃ ಮ್ಯಾಕ್ಸ್‌ವೆಲ್ ಈ ಮಾಹಿತಿ ಹಂಚಿಕೊಂಡಿದ್ದಾರೆ.

Exit mobile version