Site icon PowerTV

ರಾಹುಲ್​​ಗೆ ಉಪನಾಯಕನ ಪಟ್ಟ

ಬೆಂಗಳೂರು: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾದ ಟೆಸ್ಟ್ ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಅವರನ್ನು ಉಪ ನಾಯಕನನ್ನಾಗಿ BCCI ನೇಮಿಸಿದೆ ಎಂದು ವರದಿಯಾಗಿದೆ. ಈಗಾಗಲೇ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾಕ್ಕೆ ತೆರಳಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದು, ರೋಹಿತ್ ಶರ್ಮಾ ಉಪನಾಯಕರಾಗಿದ್ದರು. ಆದರೆ ರೋಹಿತ್ ಗಾಯಾಳುವಾಗಿ ತಂಡದಿಂದ ಹೊರಗೆ ಉಳಿದಿರೋದ್ರಿಂದ ಉಪನಾಯಕ ಯಾರು ಎಂಬ ಪ್ರಶ್ನೆ ಮೂಡಿತ್ತು. ಇದೀಗ BCCI ಕೆ.ಎಲ್ ರಾಹುಲ್‍ರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು BCCI ಆಪ್ತ ಮೂಲಗಳಿಂದ ವರದಿಯಾಗಿದೆ.

Exit mobile version