Site icon PowerTV

ಉದ್ಧವ್ ಠಾಕ್ರೆ ಉದ್ಧಟತನ!

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಸಮರ್ಥಿಸಿಕೊಳ್ಳುತ್ತಿದ್ದಾರ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಎಂಬ ಪ್ರಶ್ನೆ ಇದೀಗ ಕನ್ನಡಿರಗರಲ್ಲಿ ಉದ್ಭವಿಸಿದೆ. ‘ಕರ್ನಾಟಕದಲ್ಲಿ ಮರಾಠಿಗರ ಮೇಲೆ ಕನ್ನಡಿಗರು ದೌರ್ಜನ್ಯ ಮಾಡ್ತಿದ್ದಾರಂತೆ’ ಎಂದು  ಪ್ರಧಾನಿ ಮೋದಿಯರಿಗೆ ಟ್ವಿಟ್ ಮಾಡಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮೋದಿಯವರಿಗೆ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ.

ಪ್ರಧಾನಿ ಮಧ್ಯಪ್ರವೇಶಿಸಿ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡುವಂತೆ ಒತ್ತಾಯಿರಿಸುರ ಉದ್ಧವ್ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯ ಗಳ ಬಗ್ಗೆ ದಿವ್ಯ ಮೌನ ವಹಿಸಿದ್ದಾರೆ. ಶಿವಸೇನೆ ಪುಂಡರು ಕನ್ನಡಿಗರ ಹೋಟೆಲ್‌ಗಳು, ವಾಹನಗಳ ಮೇಲೆ ದಾಳಿ ಮಾಡ್ತಿದ್ದಾರೆ ಹಾಗೂ  ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತು ಕನ್ನಡಿಗರ ವಾಹನಗಳಿಗೆ ಕಪ್ಪು ಮಸಿ ಬಳಿಯುತ್ತಿದ್ದಾರೆ. ಇದೆಲ್ಲದರ ನಡುವೆ ಶಿವಸೇನೆ ಪುಂಡರ ಪುಂಡಾಟಿಕೆ ಮರೆತು ಕನ್ನಡಿಗರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಉದ್ಧವ್ ಠಾಕ್ರೆ.

Exit mobile version