Site icon PowerTV

ಸರ್ಕಾರದ ವಿರುದ್ಧ HDK ಟ್ವೀಟ್​​​

ಬೆಳಗಾವಿ: ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಮಾಜಿ ಸಿಎಂ‌ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ‌ಈ ಕುರಿತಾಗಿ‌ ಟ್ವೀಟ್ ಮಾಡಿರುವ ಅವರು, ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರ್ಕಾರ, ನಾಡಿನ ಸಮಸ್ಯೆಗಳನ್ನು ‘ವಿಷಯಾಂತರ’ ಮಾಡಲು ʼಮತಾಂತರʼ ವೆಂಬ ಗುಮ್ಮವನ್ನು ತಂದು ನಿಲ್ಲಿಸಿದೆ ಎಂದು ಕಿಡಿಕಾರಿದ್ದಾರೆ.

ನಾಡಿನ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ರಾಜಕೀಯ ಲಾಭದ ದುರಾಸೆಗೆ, ರಾಜ್ಯದ ಸಾಮರಸ್ಯಕ್ಕೆ ಬೆಂಕಿ ಇಡುವ ಮತಾಂತರ ನಿಷೇಧ ಮಸೂದೆಯ ನಿಜ ಆಶಯವಾಗಿದೆ.  ಎಲ್ಲಿ ತಮ್ಮ ಬಣ್ಣ ಬಯಲಾಗುತ್ತದೋ ಎಂದು ಹೆದರಿ  ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ ಎಂಬ ಸಂಶಯ ಇದೆ ಎಂದು ಹೇಳಿದ್ದಾರೆ.

ಈ ಮಧ್ಯೆ ಮಾನ್ಯ ಸ್ಪೀಕರ್ ಅವರು ಮಾಧ್ಯಮ ನಿರ್ಬಂಧದ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಹಾಗಾದರೆ, ನಿರ್ಬಂಧ ಹೇರಿದವರು ಯಾರು? ಸ್ಪೀಕರ್ ಅವರಿಗೆ ಗೊತ್ತಿಲ್ಲದೆ ನಿರ್ಬಂಧದ ಸಂದೇಶ ಮಾಧ್ಯಮಗಳಿಗೆ ಕೊಟ್ಟವರು ಯಾರು? ಈ ಬಗ್ಗೆ ಜನರಿಗೆ ಸತ್ಯಾಂಶ ಗೊತ್ತಾಗಬೇಕಿದೆ ಎಂದು ಒತ್ತಾಯಿಸಿದ್ದಾರೆ.

Exit mobile version