ಮೈಸೂರು: ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ಕಾಣಿಸಿಕೊಂಡು ಸ್ಥಳೀಯರು ಬೆಚ್ಚಿಬೀಳುವಂತೆ ಮಾಡಿದೆ.. ಮೈಸೂರಿನ ಹೃದಯ ಭಾಗದಲ್ಲಿರುವ ಈ ಕೆರೆಯಲ್ಲಿ ವಾಯು ವಿಹಾರಿಗಳಿಗೆ ಮೊಸಳೆ ಕಾಣಿಸಿಕೊಂಡಿದೆ.
ಪ್ರತಿದಿನ ಕೆರೆಯ ದಡದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ವಾಯುವಿಹಾರ ಮಾಡುತ್ತಾರೆ. ಇದೀಗ ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದರಿಂದ ವಾಯು ವಿಹಾರಿಗಳಲ್ಲಿ ಆತಂಕ ಮನೆಮಾಡಿದೆ. ಕೂಡಲೇ ಮೊಸಳೆಯನ್ನು ಇಲ್ಲಿಂದ ಸ್ಥಳಾಂತರಿಸಿ ಆತಂಕ ದೂರ ಮಾಡಬೇಕೆಂದು ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
