Site icon PowerTV

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಎಲೆಕ್ಷನ್ : ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌

ರಾಜ್ಯದಲ್ಲಿ ಬಿಜೆಪಿ ಮತ್ತು ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಮಂಗಳವಾರ, ಬುಧವಾರ ಪಕ್ಷದ ಕಾರ್ಯಕಾರಿಣಿ ಸಭೆ ಇದೆ. ಸರ್ಕಾರದ ನೂತನ ಕೊವಿಡ್ ಮಾರ್ಗಸೂಚಿ ಹಿನ್ನೆಲೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬರುವುದಿಲ್ಲ.

ಸರ್ಕಾರದ ನಿಯಮದಂತೆ 300ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಕೊರೋನಾದಿಂದ ನಾವು ಇನ್ನೂ ಮುಕ್ತವಾಗಿಲ್ಲ. ಆ ಕಾರಣಕ್ಕೆ ನಾವು ನಡ್ಡಾ ಸ್ವಾಗತಕ್ಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮ ರದ್ದು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Exit mobile version