Site icon PowerTV

ಚೇಳು ಕಡಿದು ಯುವಕ ಸಾವು

ಹುಬ್ಬಳ್ಳಿ : ಮನೆಯಲ್ಲಿ ಮೂರು ದಿನಗಳ ಹಿಂದೆ ಚೇಳು ಕಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳದ ಯುವಕನಿಗೆ ಆರೋಗ್ಯದಲ್ಲಿ ಏರುಪೇರಾಗಿ ಸಾವಿಗೀಡಾದ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನ ಹೆಬ್ಬಳ್ಳಿ ಗ್ರಾಮದ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಯಲ್ಲಪ್ಪ ಮನೆಯಲ್ಲಿ ಚೇಳು ಕಡಿದು ಮೂರು ದಿನವಾದರೂ ಕೂಡಾ ಚಿಕಿತ್ಸೆ ಪಡೆಯದೇ ಮನೆಯಲ್ಲಿದ್ದ. ಮೂರು ದಿನಗಳ ನಂತರ ಅಸ್ವಸ್ಥಗೊಂಡಿದ್ದ.ನಂತರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದರೂ, ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನೆ ಮಾಡಿದ್ದು, ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version