Saturday, August 23, 2025
Google search engine
HomeUncategorizedಹಾಸನದಲ್ಲಿ ಮಕ್ಕಳ ಲಸಿಕೆ ಅಭಿಯಾನ

ಹಾಸನದಲ್ಲಿ ಮಕ್ಕಳ ಲಸಿಕೆ ಅಭಿಯಾನ

ಹಾಸನ: ದೇಶದಾದ್ಯಂತ ಕಿರಿಯರಿಗಾಗಿ ಕೋವಿಡ್ ವ್ಯಾಕ್ಸಿನ್ ಹಿನ್ನಲೆ ರಾಜ್ಯದ ಹಲವು ಕಡೆ ಲಸಿಕೆ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಅದರಂತೆ ಹಾಸನದಲ್ಲಿ 193 ವ್ಯಾಕ್ಸಿನ್ ಕೇಂದ್ರಗಳಲ್ಲಿ ಲಸಿಕೆ ಹಂಚಿಕೆ ಮಾಡಲಾಗಿದ್ದು, ಒಟ್ಟು 79841 ಮಕ್ಕಳಿಗೆ ವ್ಯಾಕ್ಸಿನ್ ನೀಡಲು ಸಿದ್ಧತೆಗಳು ನಡೆತಯಿದೆ.

ಹಾಸನದ ವಿಭಜಿತ ಕಾಲೇಜಿನಲ್ಲಿ ಸಾಂಕೇತಿಕವಾಗಿ ಲಸಿಕೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಿದ್ದಾರೆ. ಇನ್ನು ಕಲಬುರಗಿ ನಗರದ ಆದರ್ಶ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಚಿವ ಮುರುಗೇಶ್ ನಿರಾಣಿ ಚಾಲನೆ ನೀಡಿದ್ದಾರೆ.

ಸಂಸದ ಡಾ ಉಮೇಶ್ ಜಾಧವ್, ಶಾಸಕ ಬಸವರಾಜ್ ಮತ್ತಿಮುಡ್ ಹಾಗೂ ಪರಿಷತ್ ಸದಸ್ಯ ಬಿಜಿ ಪಾಟೀಲ್ ಉಪಸ್ಥಿತಿಯಲ್ಲಿ ಮಕ್ಕಳಿಗೆ ವ್ಯಾಕ್ಸಿನ್ ಕೊಡಲಾಗುತ್ತಿದೆ. ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ 15 ರಿಂದ 18 ವರ್ಷ ಪ್ರಾಯದ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.

RELATED ARTICLES
- Advertisment -
Google search engine

Most Popular

Recent Comments