Monday, August 25, 2025
Google search engine
HomeUncategorizedಅಪಘಾತದಲ್ಲಿ ನವ ಜೋಡಿ ದುರ್ಮರಣ

ಅಪಘಾತದಲ್ಲಿ ನವ ಜೋಡಿ ದುರ್ಮರಣ

ಮಂಡ್ಯ : ನಾಗಮಂಗಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವ ಜೋಡಿ ಸೇರಿ ಮೂವರು ಸಾವಿಗೀಡಾಗಿದ್ದು, ಇನ್ನೊಬ್ಬರ ಸ್ಥಿತಿ ಚಿಂತಾಜನವಾಗಿದೆ.

ಕೆಂಪನಕೊಪ್ಪು ಗೇಟ್ ಬಳಿ ಖಾಸಗಿ ಬಸ್ ಮತ್ತು‌ ಕಾರಿನ ಮಧ್ಯೆ ಡಿಕ್ಕಿಯಾಗಿ ದುರ್ಘಟನೆ ನಡೆದಿದೆ.ಮೃತರೆಲ್ಲರೂ ಕೊಡಗಿನ ಸೋಮವಾರ ಪೇಟೆಯವರು ಎಂದು ತಿಳಿದುಬಂದಿದೆ.ಕಾರಿನಲ್ಲಿದ್ದ ನಾಲ್ಕು ಮಂದಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನೋರ್ವ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸುದೀಪ್ ಹಾಗೂ ಶ್ರೀಜಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಎಳ್ಳ ಅಮವಾಸ್ಯೆ ಹಿನ್ನೆಲೆ ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ, ಅಲ್ಲಿ ಪೂಜೆ ಮುಗಿಸಿ ವಾಪಸ್ ಸೋಮವಾರ ಪೇಟೆಗೆ ಬರುವಾಗ ಅಪಘಾತ ಸಂಭವಿಸಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments