Site icon PowerTV

ಆಸೀಸ್​​ ಮುಂದೆ ಕ್ಲೀನ್​​ಸ್ವೀಪ್​​ ಗುರಿ

ಸಿಡ್ನಿ : ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಆ್ಯಷಸ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್‌ ಪಂದ್ಯವು ಜನವರಿ 05ರಿಂದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ.

ಸಿಡ್ನಿ ಟೆಸ್ಟ್‌ ಪಂದ್ಯ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಆಡುವ ಹನ್ನೊಂದರ ಬಳಗ ಪ್ರಕಟಗೊಂಡಿದ್ದು, 5 ಪಂದ್ಯಗಳ ಆ್ಯಷಸ್ ಟೆಸ್ಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವು ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿದ್ದು, ಕ್ಲೀನ್‌ ಸ್ವೀಪ್‌ನತ್ತ ಚಿತ್ತ ನೆಟ್ಟಿದೆ.

ಮೆಲ್ಬೊರ್ನ್‌ ಟೆಸ್ಟ್‌ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ಸ್ಕಾಟ್‌ ಬೊಲ್ಯಾಂಡ್‌ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೋವಿಡ್‌ ಸೋಂಕಿಗೆ ಒಳಗಾಗಿರುವ ಟ್ರಾವಿಸ್ ಹೆಡ್‌ ಈಗಾಗಲೇ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಉಸ್ಮಾನ್ ಖವಾಜ ಆಸೀಸ್ ತಂಡವನ್ನು ಕೂಡಿಕೊಂಡಿದ್ದಾರೆ.

Exit mobile version