Site icon PowerTV

ವಾಟಾಳ್​​ ‘ಮೇಕೆ’ದಾಟು ಪ್ರತಿಭಟನೆ

ಮೇಕೆದಾಟು ಯೋಜನೆ ಜಾರಿಗೆ ವಾಟಾಳ್ ನಾಗರಾಜುರಿಂದ ವಿನೂತನ ಪ್ರತಿಭಟನೆ ನಡೆಯಿತು. ರಾಮನಗರದ ಐಜೂರು ವೃತ್ತದಲ್ಲಿ ಮೇಕೆಗಳನ್ನ ಹಿಡಿದು ಹೋರಾಟ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುವ ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ ಎಂದಿದ್ದಾರೆ.

ಅವರ ಪಾಡಿಗೆ ಅವರು ಪಾದಯಾತ್ರೆ ಮಾಡಿಕೊಳ್ಳಲಿ. ಮೇಕೆದಾಟು ಯೋಜನೆ ಆಗಬೇಕೆಂದು ಕಳೆದೊಂದು ವರ್ಷಗಳಿಂದಲೂ ನಿರಂತರವಾಗಿ ಹೋರಾಟ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಏಕೆ ಮೇಕೆದಾಟು ಯೋಜನೆ ಮಾಡಲಿಲ್ಲ. ರಾಜಕೀಯ ಮಾಡಲು ಈಗ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಗೆ ನನ್ನ ಬೆಂಬಲ ಇಲ್ಲ. ಅವರು ಪಾದಯಾತ್ರೆ ಮಾಡಿಕೊಳ್ಳಲಿ. ನಾವು ಮುಂದಿನ ದಿನಗಳಲ್ಲಿ ಮೇಕೆದಾಟು ಯೋಜನೆ ಬಗ್ಗೆ ಉಗ್ರ ಚಳುವಳಿ ನಡೆಸುತ್ತೇವೆ ಎಂದಿದ್ದಾರೆ.

Exit mobile version