Site icon PowerTV

ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ

ಬೆಂಗಳೂರು : ಮೇಕೆದಾಟು ಪಾದಯಾತ್ರೆ ಮಾಡಿಯೇ ಸಿದ್ದ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ  ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ. ಕೇವಲ ಪಾದಯಾತ್ರೆ ಮೂಲಕ ಕಾಂಗ್ರೆಸ್​​ನವರು ರಾಜಕೀಯ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಕಾಸ ಸೌಧದಲ್ಲಿ ಹೇಳಿಕೆ ನೀಡಿರುವ ಅವರು, ಪಂಜಾಬ್​ನಲ್ಲಿ ಅವರದ್ದೇ ಸರ್ಕಾರ ಇದೆ. ಅಲ್ಲಿ ಶಾಲಾ ಕಾಲೇಜುಗಳು ಬಂದ್ ಮಾಡಿದ್ದಾರೆ. ಅಮೇರಿಕಾದಲ್ಲೂ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿವೆ. ಅಧಿಕಾರ ಇದ್ದಾಗ ಏನೂ ಮಾಡದ ಕಾಂಗ್ರೆಸ್, ಈಗ ಅಧಿಕಾರಕ್ಕಾಗಿ ಪಾದಯಾತ್ರೆ ಮಾಡ್ತಿದ್ದಾರೆ. ಅವರ ಕಾಲದಲ್ಲಿ ಏನ್ ಮಾಡಿದ್ದರು ಎಂದು ಮಾಧ್ಯಮಗಳ ಮುಂದೆ ಇಡಲಿ. ಕೃಷ್ಣೆ ಕಡೆ ಪಾದಯಾತ್ರೆ ಮಾಡಿದ್ದರು ಏನಾಯ್ತು ಎಂದು ಸಚಿವ ಕಾರಜೋಳ ಪ್ರಶ್ನಿಸಿದರು.

 

Exit mobile version