Site icon PowerTV

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್​​​

ಬೀದರ್: ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೀದರ್​ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನಗರದಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಈ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪದವಿಯ ಪ್ರಥಮ ವರ್ಷದ ತರಗತಿಗಳು ಆರಂಭವಾಗಿಲ್ಲ, ಎರಡು ತಿಂಗಳು ಕಳೆದರೂ ಪಠ್ಯಕ್ರಮ ಸಿದ್ಧಗೊಂಡಿಲ್ಲ. ಕಾಲೇಜುಗಳಲ್ಲಿ ಬೋಧಕರ ಕೊರತೆ ಇದೆ. ಪಾಠ ಮಾಡಲು ಸಾಮಗ್ರಿಗಳ ಕೊರತೆ ಎದುರಗಾಗಿದೆ. ಪದವಿಯನ್ನು ಒಂದು ವರ್ಷ ವಿಸ್ತರಿಸಿರುವುದು ಹಲವು ಗೊಂದಲಗಳನ್ನು ಸೃಷ್ಟಿಸಿದೆ ಎಂದು ಜಿಲ್ಲಾಧಿಕಾರಿ ಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿಪತ್ರ ಸಲಿಸಿದರು.

Exit mobile version