Site icon PowerTV

ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ರಾಕ್ಷಸಿ ಶಿಕ್ಷಕಿ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಣಂಗೂರಿನಲ್ಲಿ ಅತ್ಯಂತ ಹೇಯವಾದ ಕೃತ್ಯವೊಂದು ನಡೆದಿರುವ ಬಗ್ಗೆ ವರದಿಯಾಗಿದೆ. ಸರ್ಕಾರಿ ಶಾಲೆಯ ಬಾಲಕಿಯೊಬ್ಬಳಿಗೆ ಶಿಕ್ಷಕಿ ಅತ್ಯಂತ ಅಮಾನವೀಯವಾಗಿ ನಡೆಸಿಕೊಂಡಿರುವ ಈ ಘಟನೆಯಲ್ಲಿ, ವಿದ್ಯಾರ್ಥಿನಿ ಶಾಲೆಗೆ ಮೊಬೈಲ್ ತಂದಳು ಎಂಬ ಕ್ಷುಲ್ಲಕ ಕಾರಣಕ್ಕೆ ಅವಳ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಹೇಯ ಕೃತ್ಯವನ್ನು ಶಿಕ್ಷಕಿ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇಂಥ ಹೇಯ ಕೃತ್ಯ ನಡೆದಿರುವುದು ಗಣಂಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ. ಈ ಘಟನೆ ಕಳೆದ ವಾರವೆ ನಡೆದಿದ್ದರೂ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಎಂಟನೇ ತರಗತಿ ವಿದ್ಯಾರ್ಥಿನಿ ತರಗತಿ ಮೊಬೈಲ್ ತಂದಿರುವುದನ್ನು ಗಮನಿಸಿದ ಮುಖ್ಯ ಶಿಕ್ಷಕಿ ಸ್ನೇಹಲತಾ, ವಿದ್ಯಾರ್ಥಿನಿಯನ್ನು ಬೇರೊಂದು ಕೊಠಡಿಗೆ ಕರೆದೊಯ್ದು ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿದ್ದಾಳೆ ಎಂದು ಆರೋಪಿಸಲಾಗಿದೆ. ಬಾಲಕಿಯನ್ನು ಅಮಾನವೀಯವಾಗಿ ನಡೆಸಿಕೊಂಡಿರುವ ಮುಖ್ಯ ಶಿಕ್ಷಕಿಯ ವಿರುದ್ಧ ಇದೀಗ ಪೋಷಕರು ದೂರು ನೀಡಲು ಮುಂದಾಗಿದ್ದಾರೆ.

Exit mobile version