Site icon PowerTV

ಚನ್ನಿಗೆ ಗೆಹ್ಲೋಟ್​​ ಬೆಂಬಲ

ಪಂಜಾಬ್ : ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ದಲಿತ ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ಭದ್ರತಾ ಲೋಪವಾಗಿರುವುದಾಗಿ ಆರೋಪಿಸಿದ್ದಾರೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಪಂಜಾಬ್ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತ ಅಭ್ಯರ್ಥಿಯನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ ಮತ್ತು ಅವರನ್ನು ಇಡೀ ರಾಷ್ಟ್ರವು ಸ್ವಾಗತಿಸಿದೆ. ಆದರೆ ಪಂಜಾಬ್‍ನಿಂದ ನಾನು ಜೀವಂತವಾಗಿ ಬಂದಿದ್ದೇನೆ ಎಂಬ ಹೇಳಿಕೆಯನ್ನು ಮೋದಿ ಅವರು ನೀಡಬಾರದಿತ್ತು. ಕೆಲವರು ರಾಜಕೀಯ ಲಾಭ ಪಡೆಯಲು ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಭದ್ರತಾ ಲೋಪವಾಗಿದೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್‍ಗೆ  ಮಾನಹಾನಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

Exit mobile version