Site icon PowerTV

ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳ ಹಾವಳಿ

ಕಲಬುರುಗಿ : ಬೀದಿ ನಾಯಿಗಳು ಕಚ್ಚಿದ ಪರಿಣಾಮವಾಗಿ ನಾಲ್ಕು ಮಕ್ಕಳಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ನಗರದ ಮುಸ್ಲಿಂ ಚೌಕ ಬಡಾವಣೆಯಲ್ಲಿ ನಡೆದಿದೆ.

ಮನೆಯ ಮುಂದೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ಕೈ, ಕಾಲು, ತಲೆ ಸೇರಿದಂತೆ ಮೈತುಂಬಾ ಮಕ್ಕಳಿಗೆ ಕಚ್ಚಿ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ನಗರದ ಜೀಮ್ಸ್ ಆಸ್ಪತ್ರೆಗೆ ದಾಖಲು ಮಾಡಿ.ಚಿಕಿತ್ಸೆ ನೀಡಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿ ಬೀದಿ ಬೀದಿ ಆಟವಾಡುತ್ತಿದ್ದ ಮಕ್ಕಳ ಮೇಲೆ ನಾಯಿ ದಾಳಿ ನಡೆಸುತ್ತಿದೆ. ತಾಜ್ ನಗರದ ಬೀದಿಯಲ್ಲಿ ಈ ಘಟನೆ ನಡೆದಿದ್ದು, ತಾಜ್ ನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ನಾಲ್ಕು ಮಕ್ಕಳಿಗೆ ಗಾಯವಾಗಿದೆ.

Exit mobile version