Site icon PowerTV

ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣಾ ವೇಳಾಪಟ್ಟಿ ಪ್ರಕಟ

ನವದೆಹಲಿ: ಭಾರತೀಯ ಚುನಾವಣಾ ಆಯೋಗ ಇಂದು ಪಂಚರಾಜ್ಯ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ್ ಮತ್ತು ಉತ್ತರಪ್ರದೇಶದಲ್ಲಿ ನಡೆಯಲಿರುವ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಿರುವ ಆಯೋಗ ಇಲ್ಲಿನ ವಿಜ್ಷಾನ ಭವನದಲ್ಲಿ ಮಧ್ಯಾಹ್ನ 3.30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಟಿಯಲ್ಲಿ ವಿವರಗಳನ್ನು ತಿಳಿಸುವುದಾಗಿ ಹೇಳಿದೆ.

ಈಗ ಚುನಾವಣೆ ನಡೆಯಲಿರುವ ಪಂಚರಾಜ್ಯಗಳಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಕೇವಲ ಪಂಜಾಬ್ ರಾಜ್ಯವೊಂದರಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದರೆ ಬರಲಿರುವ ಚುನಾವಣೆಯಲ್ಲಿ ತಮ್ಮದೇ ಪಕ್ಷ ಗೆಲ್ಲಲಿದೆ ಎಂದು ಪ್ರತಿಯೊಂದು ಪಕ್ಷಗಳೂ ಹೇಳಿಕೊಳ್ಳುತ್ತಿವೆ.

Exit mobile version