Site icon PowerTV

ಕಟ್ಟುನಿಟ್ಟಿನ ವೀಕೆಂಡ್‌ ಕರ್ಫ್ಯೂ

ರಾಯಚೂರು : ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬೇಕಾ ಬಿಟ್ಟಿಯಾಗಿ ಹೊರಗಡೆ ತಿರುಗಾಡಲು ಬಂದ ಜನರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸಿದರು.

ರಾಯಚೂರು ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ನಗರದ ಅಂಗಡಿ, ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಲಾಗಿತ್ತು. ದೇವದುರ್ಗ, ಲಿಂಗಸಗೂರು, ಮಸ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್‌ ಕರ್ಫ್ಯೂ ಜಾರಿ ಮಾಡಲಾಗಿದೆ. ಅಲ್ಲಲ್ಲಿ ಸಾರ್ವಜನಿಕರಿಂದ ಸಣ್ಣಪುಟ್ಟ ವಿರೋಧ ವ್ಯಕ್ತವಾಗಿದ್ದನ್ನು ಹೊರತುಪಡಿಸಿದರೆ ಉಳಿದಂತೆ ಬಹುತೇಕ ಕಡೆ ಕೊರೋನಾ ಮಾರ್ಗಸೂಚಿ ಪಾಲಿಸುತ್ತಿದ್ದಾರೆ.

Exit mobile version