Site icon PowerTV

ಕೋವಿಡ್ ನಿಯಮ ಉಲ್ಲಂಘಿಸಿ ಬಿಜೆಪಿ ಶಾಸಕನಿಂದ ಸಕ್ಕತ್ ಡಾನ್ಸ್

ಬೀದರ್ : ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಲೇ ಇದೆ. ಈ ಕಾರಣದಿಂದಾಗಿ ಸರ್ಕಾರ ವೀಕೆಂಡ್​ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಆದರೆ ಹಲವು ಕಡೆಗಳಲ್ಲಿ ನಿಯಮ ಉಲ್ಲಂಘಯಾಗಿದ್ದು ಬೀದರ್ ಜಿಲ್ಲೆಯಲ್ಲಿ ಈ ಘಟನೆ ಕಂಡುಬಂದಿದೆ.

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗ ಸಕ್ಕತ್ ಡಾನ್ಸ್​ಗೆ ಹೆಜ್ಜೆ ಹಾಕಿದ್ದಾರೆ. ಸರ್ಕಾರ ಜಾರಿಗೊಳಿಸಿರುವ ಕರ್ಫ್ಯೂ ಉಲ್ಲಂಘಿಸಿ ಕುಣಿದು ಕುಪ್ಪಳಿಸಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರ ಇಲ್ಲದೆ ಶಾಸಕ ಬಿಂದಾಸ್ ಸ್ಟೆಪ್ಸ್ ಹಾಕಿದ್ದಾರೆ. ಶಾಸಕ ಶರಣು ಸಲಗರ ಸ್ಟೆಪ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಸಕರ ವರ್ತನೆಗೆ ಕಲ್ಯಾಣ ನಾಡಿನ ಜನರು ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯಾನಾ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Exit mobile version