Site icon PowerTV

ಭಾರತದ ವಿರುದ್ಧ ಇಮ್ರಾನ್​ ಖಾನ್​​​ ಆರೋಪ

ಪಾಕಿಸ್ತಾನ್: ಭಾರತದಲ್ಲಿ ಅಲ್ಪಸಂಖ್ಯಾತರನ್ನು ತೀವ್ರವಾದಿ ಗುಂಪುಗಳು ಬಲಿಪಶು ಮಾಡುತ್ತಿದ್ದಾರೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಭಾರತದಲ್ಲಿ ಅಲ್ಪಸಂಖ್ಯಾತರ ಮಾರಣಹೋಮ ಆಗುವುದನ್ನು ಇಚ್ಛಿಸುತ್ತಿದೆಯೇ ಎಂದು ಅವರು ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಹರಿದ್ವಾರ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಮುಸ್ಲಿಮರ ವಿರುದ್ಧ ಹಿಂದೂ ಧಾರ್ಮಿಕ ಮುಖಂಡರು ಪ್ರಚೋದನಾತ್ಮಕ ಭಾಷಣಗಳನ್ನು ಉಲ್ಲೇಖಿಸಿ ಅವರು ಮಾತನಾಡುತ್ತಿದ್ದರು. ಈ ಬಗೆಯ ವಾತಾವರಣದಿಂದಾಗಿ ಕೋಮು ಸೌಹಾರ್ದತೆಗೆ ಧಕ್ಕೆ ಒದಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Exit mobile version