Site icon PowerTV

ಸಚಿವ ಮಾಧುಸ್ವಾಮಿಗೆ ಕೋವಿಡ್

ಬೆಂಗಳೂರು : ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿರುವ ಕೊರೋನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಆರ್ ಅಶೋಕ್, ಶಿಕ್ಷಣ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಸೋಂಕು ತಗುಲಿದೆ.

ಇದರ ಬೆನ್ನಲ್ಲೇ ಇದೀಗ ಕಾನೂನು ಸಚಿವ ಮಾಧುಸ್ವಾಮಿ ಅವರಿಗೂ ಕೊರೋನಾ ಸೋಂಕು ಹರಡಿದೆ. ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಸಚಿವ ಮಾಧುಸ್ವಾಮಿ ಪುತ್ರಿಗೂ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

Exit mobile version