Site icon PowerTV

ಸರ್ಕಾರದ ವಿರುದ್ಧ ಸಿದ್ದು ಸಿಡಿಮಿಡಿ

ಕನಕಪುರ: ಬಿಜೆಪಿಯ ಸಚಿವರು, ಶಾಸಕರು ರ್ಯಾಲಿ, ಸಾರ್ವಜನಿಕ ಸಮಾರಂಭ ಮಾಡಿದರೆ ಯಾವುದೇ ಕೇಸು ಹಾಕುವುದಿಲ್ಲ. ಜನರಿಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ತಡೆಯಲು 30 ಜನರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಸರ್ಕಾರದ ಈ ಗೊಡ್ಡು ಬೆದರಿಕೆಗೆಲ್ಲ ನಾವು ಜಗ್ಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಕನಕಪುರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಸುಳ್ಳು ಜಾಹೀರಾತು ನೀಡಿ ಜನರನ್ನು ದಾರಿ ತಪ್ಪಿಸುವುದನ್ನು ಬಿಟ್ಟು ಮೇಕೆದಾಟು ಯೋಜನೆಗಾಗಿ ಬೇರೇನನ್ನೂ ಮಾಡಿಲ್ಲ ಎಂದು ಕಿಡಿಕಾರಿದರು. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೋಗಿದ್ದೆ, ನಿನ್ನೆ ಪಾದಯಾತ್ರೆಯಲ್ಲಿ ಭಾಗವಹಿಸಲಿಲ್ಲ. ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಂಡು ನಿನ್ನೆ ಇಡೀ ದಿನ ವಿಶ್ರಾಂತಿ ಪಡೆದೆ. ಈಗ ಜ್ವರ ಬಿಟ್ಟಿದೆ. ಇಂದು ಪಾದಯಾತ್ರೆಯಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದರು.

Exit mobile version