Site icon PowerTV

ಕಾಂಗ್ರೆಸ್​ ನಾಯಕರಿಗೆ ಆರಗ ಜ್ಞಾನೇಂದ್ರ ಮನವಿ

ಮೇಕೆದಾಟು ಪಾದಯಾತ್ರೆ ಕೊರೋನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಕಾಂಗ್ರೆಸ್‌ ನಾಯಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಇವರು ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡಪರಿಣಾಮದ ಬಗ್ಗೆ ಆತಂಕ ಇತ್ತು. ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆವು. ಈಗ ನಮ್ಮ ಆತಂಕ ನಿಜವಾಗುತ್ತಿದೆ. ಕೊರೋನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿರುವುದಲ್ಲದೇ ವಿತಂಡ ವಾದ ಮಂಡಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Exit mobile version