Site icon PowerTV

ಸಿನಿಮೀಯ ರೀತಿಯಲ್ಲಿ ಕಳ್ಳನ ಸೆರೆ

ಮಂಗಳೂರು : ಒಂದು ಕಿಲೋಮೀಟರ್ ಓಡಿ ಹೋಗಿ ಸಿನಿಮೀಯ ರೀತಿಯಲ್ಲಿ ಪೊಲೀಸೊಬ್ಬರು ಕಳ್ಳನನ್ನು ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ನೆಹರು ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯ ಮೊಬೈಲ್ ಹಣ ಕದಿಯಲಾಗಿತ್ತು.ಬಳಿಕ ತಕ್ಷಣವೇ ಇಬ್ಬರು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಇತ್ತ ಮೊಬೈಲ್ ಕಳೆದುಕೊಂಡ ವ್ಯಕ್ತಿ ಓರ್ವ ಆರೋಪಿಯನ್ನು ಹಿಂಬಾಲಿಸಿದ್ದಾರೆ. ಇದನ್ನು ನೋಡಿದ ಪೊಲೀಸ್ ಕಮಿಷನರ್, ಆರೋಪಿಯನ್ನು ಹಿಡಿಯಲು ಸೂಚನೆಯನ್ನು ನೀಡಿದ್ದಾರೆ. ಬಳಿಕ ಓರ್ವ ಆರೋಪಿಯನ್ನು ಪೊಲೀಸರು ಹಿಡಿದಿದ್ದಾರೆ.

‘ಖಾಕಿ ಪ್ಲಾನ್ ಗೊತ್ತಾಗಿ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದರು. ಈ ವೇಳೆಯಲ್ಲಿ ಒಂದು ಕಿಲೋಮೀಟರ್ ಓಡಿ ಕಳ್ಳರನ್ನು ಹಿಡಿಯಲು ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಕಾರ್ಯಾಚರಣೆ ಸಂಪೂರ್ಣ ದೃಶ್ಯ ಸೆರೆಯಾಗಿದ್ದು, ಈ ವೀಡಿಯೋವನ್ನು ಕಮಿಷನರ್ ಶಶಿಕುಮಾರ್ ತಮ್ಮ ಫೇಸ್​ ಬುಕ್​ನಲ್ಲಿ ಅಪ್ಲೋಡ್ ಮಾಡಿಕೊಂಡು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ಪೊಲೀಸ್ ವರುಣ್ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದೆ.

Exit mobile version