Site icon PowerTV

ಮೇಕೆದಾಟು ಪಾದಯಾತ್ರೆ : ಹಾಸನದ ವಿವಿಧ ಠಾಣೆಗಳಲ್ಲಿ ಕೇಸ್

ಹಾಸನ : ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೈ ನಾಯಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಹಾಸನ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೈ ನಾಯಕರ ವಿರುದ್ಧ ಕೇಸ್ ದಾಖಲಾಗಿದೆ.

ಕೋವಿಡ್ ನಿಯಮ ಉಲ್ಲಂಘನೆ ಆರೋಪದಲ್ಲಿ ಹಾಸನ ನಗರ, ಬಡಾವಣೆ,ಪೆನ್ಷನ್ ಮೊಹಲ್ಲ, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲ್ಲೂಕಿನ ಠಾಣೆಗಳಲ್ಲಿ ಕೇಸ್ ದಾಖಲು ಮಾಡಲಾಗಿದೆ. ಜನವರಿ 12ರಂದು ಹಾಸನ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಗೆ ತೆರಳಿದ್ದರು.

ಪಾದಯಾತ್ರೆ ಮುಗಿಸಿ ಬಂದ ಬಳಿಕ ಪೊಲೀಸರು ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ್ದಾರೆ.ಕೋವಿಡ್ ಮಾರ್ಗಸೂಚಿಗೆ ವಿರುದ್ದವಾಗಿ ಜನರನ್ನು ಸೇರಿಸಿರೋದು, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ ನಿರ್ಲಕ್ಷ್ಯ ವಹಿಸಿರೋ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

Exit mobile version