Site icon PowerTV

ಅಕ್ಕಿಪೇಟೆಯಲ್ಲಿ ಅಗ್ನಿ ಅವಘಡ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಬೆಂಗಳೂರು :ಅಕ್ಕಿಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಮೂರು ಅಂತಸ್ಥಿನ ಕಟ್ಟಡದ ನೆಲಮಹಡಿಯಲ್ಲಿ ಹಣ್ಣಿನ ಅಂಗಡಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಬೆಂಕಿ ಹೊತ್ತಿದ ಕೆಲವೇ ನಿಮಿಷಗಳಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಚರಣೆಯನ್ನು ಮಾಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಅವಘಡ ಸಂಭವಿಸಿದ ಸಮೀಪದಲ್ಲೇ ಪಟಾಕಿ ಅಂಗಡಿ ಇತ್ತು, ಈ ಆಕಸ್ಮಿಕ ಬೆಂಕಿಗೆ ಮರದ ಬಾಕ್ಸ್ ಗಳಿದ್ದ ಕಾರಣ ಗೋಡೌನ್ ಹೊತ್ತಿ ಉರಿದಿದೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.

Exit mobile version