Site icon PowerTV

ವೀಕೆಂಡ್‌ ಕರ್ಫ್ಯೂಗೆ ನನ್ನ ವಿರೋಧವಿದೆ : ಸಿಟಿ ರವಿ

ರಾಜ್ಯ:  ಮೂರನೇ ಅಲೆ ಬಗ್ಗೆ ಜನರು ಹೆಚ್ಚಿನ ಆತಂಕ ಪಡುವ ಅಗತ್ಯ ಇಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಗೋವಾದ ಪಣಜಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವೀಕೆಂಡ್‌ ಕರ್ಫ್ಯೂ, ಲಾಕ್‌ಡೌನ್‌ಗೆ ನನ್ನ ವಿರೋಧವಿದೆ. ಲಾಕ್‌ಡೌನ್‌‌, ಕರ್ಫ್ಯೂ ಹೇರುವುದಕ್ಕಿಂತ ಕೆಲವು ನಿಯಮ ಹಾಕಬೇಕು. ಜನರನ್ನು ಎಚ್ಚರ ವಹಿಸುವಂತೆ ನೋಡಿಕೊಂಡು ಕೋವಿಡ್ ನಿಯಂತ್ರಿಸಬಹುದು. ಮೂರನೇ ಅಲೆಯಲ್ಲಿ ಹಾನಿ ಪ್ರಮಾಣ ಕಡಿಮೆ ಇರುವುದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಇನ್ನು ಕೊರೋನಾ ಏರಿಕೆಯಾಗುತ್ತಿರುವ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ. ಇನ್ನೂ ಲಾಕ್​​​​​ಡೌನ್​​ ಬೇಡ ಎಂದು ಹೇಳಿಕೆ  ನೀಡಿದ್ದಾರೆ.  ಅವರು, ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹೀಗಾಗಿ ಸರ್ಕಾರ ನೋಡಿಕೊಂಡು ತೀರ್ಮಾನ ಮಾಡಬೇಕು.

ಸಿಎಂಗೆ ಕೂಡಾ ವೈಯಕ್ತಿಕ ಸಲಹೆ ನೀಡುತ್ತಿದ್ದೇನೆ. ವಿಕೇಂಡ್ ಕರ್ಫ್ಯೂ ಸಡಿಲಿಕೆ ಮಾಡಬೇಕು ಎಂದು ಹೇಳಿದರು. ಬಳಿಕ, ಪಂಚರಾಜ್ಯ ಚುನಾವಣೆ ವಿಚಾರವಾಗಿ ಮಾತನಾಡಿ, ಎಲ್ಲಾ ಸಮೀಕ್ಷೆಯಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನೋ ಮಾಹಿತಿ ಇದೆ. ನಾಲ್ಕು ರಾಜ್ಯಗಳಲ್ಲಿ ನಮ್ಮ ಪರ ಅಲೆಯಿದೆ ಎಂದು ಹೇಳಿದರು.

Exit mobile version