Site icon PowerTV

ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್​​ಗೆ ಕೋವಿಡ್ ಪಾಸಿಟಿವ್ ದೃಢ

ವಿಜಯಪುರ : ಮಾಜಿ ಆರೋಗ್ಯ ಸಚಿವ, ವಿಜಯಪುರ ಜಿಲ್ಲೆಯ ಬಸವನ ವಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಕಳೆದ ಮೂರು ದಿನಗಳ ಹಿಂದೆ ತಮ್ಮ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ, ಆರೋಗ್ಯ ತಪಾಸಣೆ ಮಾಡಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಹೀಗಾಗಿ ತಾವು 7 ದಿನಗಳ ಕಾಲ ಹೋಮ್ ಐಸೋಲೇಶನ್​​ಗೆ ಒಳಗಾಗಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಬೇಕು.

ಅಲ್ಲದೇ ರಾಜ್ಯದಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ 3ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷಿತರಾಗಿರಬೇಕು ಎಂದು ಮನವಿ ಮಾಡಿದ್ದಾರೆ.

Exit mobile version