Site icon PowerTV

ಸಿಎಂ ಬೊಮ್ಮಾಯಿ ಖಡಕ್​​ ವಾರ್ನಿಂಗ್​​​​

ಬೆಂಗಳೂರು : ನಿನ್ನೆ ಡಿಸಿಗಳ ಜೊತೆ ಸಭೆ ನಡೆಸಿದ್ದೇನೆ. ಹಾಲಿ ನಿರ್ಬಂಧಗಳ ಪುನರ್ ಪರಿಶೀಲನೆ ಹಾಗೂ ಲಸಿಕೆ ಬಗ್ಗೆ ವಿಶೇಷ ಗಮನ ಕೊಡಲು ಸೂಚಿಸಿದ್ದೇನೆ.

ಶುಕ್ರವಾರ ಮತ್ತೆ ತಜ್ಞರ ಜೊತೆಗೆ ಸಭೆ ಮಾಡ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂ ವಾಪಸ್, ನಿರ್ಬಂಧಗಳ ಸಡಿಲಿಕೆ ಬಗ್ಗೆ ತಜ್ಞರ ಅಭಿಪ್ರಾಯದಂತೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

ಜನವರಿ ಅಂತ್ಯಭಾಗದಿಂದ ಫೆಬ್ರವರಿ ಮಧ್ಯಭಾಗದವರೆಗೂ ಕೋವಿಡ್ ಹೆಚ್ಚಾಗುತ್ತದೆ ಅಂತ ತಜ್ಞರು ಅಂದಾಜು ಮಾಡಿದ್ದಾರೆ. ಕಾಂಗ್ರೆಸ್ ನವರು ದೂರು ಕೊಡುವ ಅಗತ್ಯ ಇಲ್ಲ, ಯಾರೇ ಕೋವಿಡ್ ನಿಯಮ ಉಲ್ಲಂಘಿಸಿದರೂ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುವ ಖಡಕ್ ಸೂಚನೆ ನೀಡಿದ್ದಾರೆ.

Exit mobile version