Site icon PowerTV

ಪಂಚಾಯತಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳ ಪ್ರತಿಭಟನೆ

ವಿಜಯಪುರ : ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬಾರದಿರುವ ಕಾರಣ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಂಟನೂರು ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬರ್ತಾ ಇಲ್ಲ ಎಂಬ ಕಾರಣದಿಂದ ವಿದ್ಯಾರ್ಥಿಗಳು ಇಂದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆಯನ್ನು ನಡೆಸಿದರು.

ಹಲವು ದಿನಗಳಿಂದ ಈ ಸಮಸ್ಯೆಗಳು ಕಂಡು ಬಂದಿದ್ದು ಇತ್ತಕಡೆ ಗ್ರಾಮಸ್ಥರು ಕೂಡ ಶಿಕ್ಷಕರಿಗೆ ಪ್ರಶ್ನೆ ಮಾಡುತ್ತಿಲ್ಲ. ನಮ್ಮ ಶಿಕ್ಷಣದ ಸಮಯ ಹಾಳಾಗಿ ಹೋಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Exit mobile version