Site icon PowerTV

ಯತ್ನಾಳ್​​​ ಅನುಭವಿ ರಾಜಕಾರಣಿ : ಎಂ ಪಿ ರೇಣುಕಾಚಾರ್ಯ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಪ್ರಬಲ ಸಚಿವ ಸ್ಥಾನಾಕಾಂಕ್ಷಿಗಳಾಗಿರುವ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ವಿಕಾಸಸೌಧದಲ್ಲಿ ಭೇಟಿಯಾದರು.

ಚರ್ಚೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಇದು ನಮ್ಮ ಆಕಸ್ಮಿಕ ಸೌಜನ್ಯದ ಭೇಟಿ. ಯತ್ನಾಳ್ ಅವರು ಅತ್ಯಂತ ಅನುಭವಿ ರಾಜಕಾರಣಿಗಳು. ಅವರು ಹಿರಿಯರು ಹಾಗೂ ಕೇಂದ್ರ ಸಚಿವರಾಗಿದ್ದರು. ಮುಂದೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಚರ್ಚೆ ಮಾಡಿದೆವು.

ಮೇಕೆದಾಟು ಪಾದಯಾತ್ರೆಯ ಮೂಲಕ ಅಧಿಕಾರಕ್ಕೆ ಬಂದ್ವಿ ಎಂಬಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದಾರೆ. ಡಿ.ಕೆ.ಶಿವಕುಮಾರ್ ವೇಗ ತಡೆಯಲು ಚರ್ಚೆ ನಡೆಸಿದೆವು ಹಾಗೂ ದೆಹಲಿಗೆ ತೆರಳಿ ವರಿಷ್ಠರ ಭೇಟಿ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

Exit mobile version