Monday, August 25, 2025
Google search engine
HomeUncategorizedಮತ್ತೆ ಸಿದ್ದರಾಮಯ್ಯ ವಿರುದ್ಧ ಸಿಡಿದ ಹೆಚ್ಡಿಕೆ

ಮತ್ತೆ ಸಿದ್ದರಾಮಯ್ಯ ವಿರುದ್ಧ ಸಿಡಿದ ಹೆಚ್ಡಿಕೆ

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಟ್ವಿಟರ್​ನಲ್ಲಿ ತೀಕ್ಷ್ಣ ವಾಗ್ದಾಳಿಯನ್ನು ನಡೆಸಿದ್ದಾರೆ. ಅವರು ಹೇಳಿರುವುದನ್ನು ಓದಿ “ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ? ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ? ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ. ‘ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ? ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ, ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ! ಜತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳಾ? ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ. ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ! ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ! ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ.

‘ತುಮಕೂರು ಜಿಲ್ಲೆಯಿಂದ ಓಡಿಸಿ, ಬಿಜೆಪಿಯ ಬಾಲಂಗೋಚಿ’ ಇಂತಹ ನುಡಿಮುತ್ತುಗಳು ‘ಸ್ವಯಂ ಘೋಷಿತ ಸಂವಿಧಾನ ಪಂಡಿತ’ನ ರಾಜಕೀಯ ಫಜೀತಿಯ ಪರಾಕಾಷ್ಠೆಯಲ್ಲವೆ? ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ನಿಜ, ಚುನಾವಣೆಯಲ್ಲಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ, ನಾನೂ ಸೋತಿದ್ದೇನೆ. ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ, ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ. ಆದರೆ ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ. ಇನ್ನು ಕಮೀಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ‘ ಅರ್ಕಾವತಿ ‘ ಆರ್ತನಾದಕ್ಕೆ ಕಾರಣರು ಯಾರು? ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ? ದೇವರಾಜ ಅರಸು ಅವರ ನಂತರ ‘ ಐದು ವರ್ಷದ ಮುಖ್ಯಮಂತ್ರಿ ‘ ಎಂದು ಹೇಳಿಕೊಳ್ಳುವ ಅಪರ ಸಿದ್ದಪುರುಷರ ಪಾಡೇನು? ‘ಐದು ವರ್ಷದ ಮುಖ್ಯಮಂತ್ರಿ ‘ ಎಂಬ ಪ್ರಭಾವಳಿಯ ಕಥೆ ಏನು? ಎಂದು ಕುಮಾರಸ್ವಾಮಿ ಸಿದ್ದು ವಿರುದ್ಧ ಟ್ವೀಟ್ ನಲ್ಲಿ ಹಿಗ್ಗಾಮುಗ್ಗ ಕೆಂಡಕಾರಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments