Site icon PowerTV

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್ ವಿಧಿವಶ

ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್ ತಡರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸದಲ್ಲಿ ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ರಾಜ್ಯ ಗಡಿ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಸಲಹೆ ನೀಡುವ ಸಲುವಾಗಿ ಸರ್ಕಾರ ಈ ಆಯೋಗವನ್ನು ರಚನೆಮಾಡಿತ್ತು. ಆಯೋಗದ ಹಿಂದಿನ ಅಧ್ಯಕ್ಷ ಎಸ್‌. ರಾಜೇಂದ್ರ ಬಾಬು 2017ರ ನವೆಂಬರ್‌ನಲ್ಲಿ ರಾಜೀನಾಮೆ ಸಲ್ಲಿಸಿದ್ದರು. ಆ ಸ್ಥಾನಕ್ಕೆ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿತ್ತು. ಆದ್ರೆ, ತಡರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

Exit mobile version