Site icon PowerTV

ಪಕ್ಷದ ತೀರ್ಮಾನಕ್ಕೆ ಬದ್ಧ: ಸಚಿವ ಈಶ್ವರಪ್ಪ

ಶಿವಮೊಗ್ಗ : ನಾನು ಹಿಂದಿನಿಂದಲೂ ಪಕ್ಷ ಏನು ಹೇಳುತ್ತೋ ಅದನ್ನು ಮಾಡುತ್ತೇನೆ. ಪಕ್ಷ ಏನು ಜವಾಬ್ದಾರಿ ಕೊಡುತ್ತೋ ಅದನ್ನು ನಿಭಾಯಿಸ್ತಿನಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾವುದೇ ರಾಜಕಾರಣಿ ಮಂತ್ರಿಯಾಗುವ ಆಸೆ ಇಟ್ಟುಕೊಳ್ಳುವುದು ತಪ್ಪಲ್ಲ. ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಯಿಸುವ ಪ್ರಶ್ನೆಯೇ ಇಲ್ಲ, ನಾನು ಪಕ್ಷದ ಸಂಘಟನೆ ಸ್ಥಾನ ಸಂತೋಷದಿಂದ ಒಪ್ಪಿಕೊಳ್ತೀನಿ.

ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಪಕ್ಷದ ಅಧ್ಯಕ್ಷನಾಗು ಅಂದಾಗ ಅಧ್ಯಕ್ಷ ಸಹ ಆಗಿದ್ದೇನೆ. ಮಂತ್ರಿ ಸ್ಥಾನಕ್ಕಿಂತಲೂ ನನಗೆ ಈ ಸ್ಥಾನ ಬಹಳ ಖುಷಿ ಕೊಡುತ್ತದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

Exit mobile version