Site icon PowerTV

ಗೂಗಲ್ ಸಿಇಒ ಸುಂದರ್ ಪಿಚೈ ವಿರುದ್ಧ FIR

ಮುಂಬೈ: ಅನುಮತಿಯಿಲ್ಲದೇ ಸಿನಿಮಾ ಪ್ರಸಾರ ಮಾಡಿರುವ ಮತ್ತು ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಏಕ್ ಹಸೀನಾ ಥಿ ಏಕ್ ದೀವಾನಾ ಥಾ ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅನುಮತಿ ಇಲ್ಲದೇ ಗೂಗಲ್​ನಲ್ಲಿ ಅಪ್​ಲೋಡ್​ ಮಾಡಲಾಗಿದೆ ಎಂದು ಆರೋಪಿಸಿ ನಿರ್ದೇಶಕ ಸುನೀಲ್ ದರ್ಶನ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.ಈ ಸಂಬಂಧ ಮಾತನಾಡಿರುವ ನಿರ್ಮಾಪಕ ಸುನೀಲ್​ ದರ್ಶನ್​, ಚಲನಚಿತ್ರ ನಿರ್ಮಾಪಕ ಮತ್ತು ಹಕ್ಕುಸ್ವಾಮ್ಯ ಮಾಲೀಕರಾಗಿ, ನಾನು ಕೆಲವು ಹಕ್ಕುಗಳನ್ನು ಹೊಂದಿದ್ದೇನೆ. ಅವುಗಳನ್ನು ನಿರ್ದಯವಾಗಿ ಉಲ್ಲಂಘಿಸಿದಾಗ, ನಾನು ಏನು ಮಾಡಬೇಕು? ನಾನೊಬ್ಬ ಅಸಹಾಯಕ,” ಎಂದು ತಿಳಿಸಿದ್ದಾರೆ.

Exit mobile version