Site icon PowerTV

ಮುಖ್ಯಮಂತ್ರಿಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ದೂರವಾಣಿ ಕರೆ ಮಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಶುಭಾಶಯ ಕೋರಿದ್ದಾರೆ. ಅಲ್ಲದೆ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 6 ತಿಂಗಳು ತುಂಬಿದ್ದಕ್ಕೆ ಶುಭಾಶಯ ತಿಳಿಸಿದ್ದಾರೆ.

ಸದ್ಯ ಹುಟ್ಟು ಹಬ್ಬ ಹಾಗೂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಸಂತಸದಲ್ಲಿರುವ ಸಿಎಂ ಬೊಮ್ಮಾಯಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸಿಎಂಗೆ ಶುಭಕೋರಲು ಸಚಿವರು ಹಾಗೂ ಶಾಸಕರು ಆರ್ಟಿ ನಗರದ ನಿವಾಸಕ್ಕೆ ಆಗಮಿಸುತ್ತಿದ್ದಾರೆ. ಸಚಿವ ಆರಗ ಜ್ಞಾನೇಂದ್ರ, ಶಾಸಕರಾದ ರಾಮದಾಸ್ ಸೇರಿದಂತೆ ಹಲವು ನಾಯಕರು ದಂಡು ಆಗಮಿಸಿದೆ.

Exit mobile version