Site icon PowerTV

ಕಳಪೆ ಪ್ರದರ್ಶನ ಆರ್​ ಆ​ಶ್ವಿನ್​ ಔಟ್

ಬಹುನಿರೀಕ್ಷಿತ ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಈಗಾಗಲೇ ಬಿಸಿಸಿಐ ಭಾರತ ತಂಡವನ್ನು ಪ್ರಕಟ ಮಾಡಿದೆ. ಆದರೆ, ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​​ನ್ನು ಹೊರಗಿಟ್ಟಿರುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಹಲವು ವರ್ಷಗಳ ಕಾಲ ಅವಕಾಶ ವಂಚಿತರಾಗಿದ್ದ ಅನುಭವಿ ಆಫ್‌ ಸ್ಪಿನ್ನರ್‌ ಆರ್. ಅಶ್ವಿನ್‌, ಕಳೆದ ವರ್ಷವಷ್ಟೆ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಆಡುವ ಮೂಲಕ ಟೀಮ್ ಇಂಡಿಯಾ ಪರ ಭರ್ಜರಿ ಕಮ್​ಬ್ಯಾಕ್ ಮಾಡಿದ್ದರು. ಆದರೆ, ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ನೀಡಿದ ಕಳಪೆ ಪ್ರದರ್ಶನ ಬಳಿಕ ಮಾಂತ್ರಿಕ ಆಫ್‌ ಸ್ಪಿನ್ನರ್‌ ಆರ್‌ ಅಶ್ವಿನ್ ಮತ್ತೊಮ್ಮೆ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ವಿಂಡೀಸ್‌ ವಿರುದ್ಧದ ತಲಾ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಮತ್ತು ಟಿ20 ಕ್ರಿಕೆಟ್‌ ಸರಣಿಗಳಿಂದ ಅಶ್ವಿನ್ ಅವರನ್ನು ಕೈಬಿಡಲಾಗಿದೆ.

 

Exit mobile version