Site icon PowerTV

ಎಸ್‌ಪಿ – ಬಿಎಸ್‌ಪಿ ತೊರೆದ ಯುಪಿ ನಾಯಕರು, ಸಚಿವೆ ಶೋಭ ಕರಂದ್ಲಾಜೆ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಚುನಾವಣಾ ಹೊಸ್ತಿಲಲ್ಲಿ ಪಕ್ಷಾಂತರ ಆಗುವ ಪ್ರಕ್ರಿಯೆಗಳು ಸಹಜ. ಆದ್ರೆ ಉತ್ತರ ಪ್ರದೇಶದ ಬಿಜೆಪಿ, ಜದ್ದಿಗೆ ಬಿದ್ದಂತೆ ಕಾಣುತ್ತಿದೆ. ಆಪರೇಷನ್ ಕಮಲ ಮುಂದುವರಿಸಿರುವ ಬಿಜೆಪಿ ಇಂದು ಪಕ್ಷಕ್ಕೆ ಮತ್ತಷ್ಟು ವಿಪಕ್ಷಗಳ ನಾಯಕರನ್ನು ಕರೆ ತರುವಲ್ಲಿ ಯಶಸ್ವಿಯಾಗಿದೆ.

ಸಮಾಜವಾದಿ ಪಕ್ಷದ ನಾಯಕ, ಸಿಧೌಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮನೀಶ್ ರಾವತ್ ಮತ್ತು ಹಮೀರ್‌ಪುರ ವಿಧಾನಸಭಾ ಕ್ಷೇತ್ರದ ಮಾಜಿ ಎಸ್‌ಪಿ ಅಭ್ಯರ್ಥಿ ಡಾ. ಮನೋಜ್ ಕುಮಾರ್ ಪ್ರಜಾಪತಿ ಲಕ್ನೋದಲ್ಲಿ ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ ಮತ್ತು ಉತ್ತರ ಪ್ರದೇಶ ಚುನಾವಣಾ ಸಹ ಪ್ರಭಾರಿ ಶೋಭಾ ಕರಂದ್ಲಾಜೆಯವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಉತ್ತರ ಪ್ರದೇಶದ ಮಾಜಿ ರಾಜ್ಯ ಸಚಿವ ಮತ್ತು ಭದೋಹಿ ಅಸೆಂಬ್ಲಿ ಕ್ಷೇತ್ರದ ಬಿಎಸ್‌ಪಿ ಶಾಸಕ ರಂಗನಾಥ್ ಮಿಶ್ರಾರವರು ಕೂಡಾ ಬಿಜೆಪಿಗೆ ಸೇರ್ಪಡೆಗೊಂಡ ನಾಯಕರಲ್ಲಿ ಪ್ರಮುಖರಾಗಿದ್ದಾರೆ. ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಸಚಿವೆ ಶೋಭ ಕರಂದ್ಲಾಜೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಭಾವಶಾಲಿ ಆಡಳಿತದಿಂದಾಗಿ ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಬಿಜೆಪಿ ವರ್ಚಸ್ಸು ದೇಶ ಮತ್ತು ಉತ್ತರ ಪ್ರದೇಶದ ರಾಜ್ಯಾದ್ಯಂತ ಹೆಚ್ಚುತ್ತಿದೆ. ಮುಂಬರುವ ವಿಧಾನಸಭಾ ಚುನವಣೆಯಲ್ಲಿ ಬಿಜೆಪಿ ನಿಚ್ಚಳ ಗೆಲುವು ಸಾಧಿಸಲಿದೆ ಎಂದು ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.

Exit mobile version