Site icon PowerTV

ಖತರ್ನಾಕ್ ಆರೋಪಿ ಅಂದರ್

ಬೆಂಗಳೂರು : ರೇವಾ ಕಾಲೇಜಿನಲ್ಲಿ‌ ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಹೇಳಿ ಯುವತಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರಾಜೇಶ್ವರ್ ಎಂದು ತಿಳಿದುಬಂದಿದೆ.

ರೇವಾ ಕಾಲೇಜಿನಲ್ಲಿ ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಹೇಳಿ ಯುವತಿಯಿಂದ 1 ಲಕ್ಷದ 27 ಸಾವಿರ ರೂಪಾಯಿ ಹಣ ಪಡೆದು ವಂಚಿಸಿದ್ದ. ಯುವತಿ ತನ್ನ ತಂದೆ ಮೂಲಕ ಆರೋಪಿ ಅಕೌಂಟ್​ಗೆ ಹಣ ವರ್ಗಾವಣೆ ಮಾಡಿದ್ದಳು. ಹಣ ಪಡೆದ ಆರೋಪಿ ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದ. ಈ ಬಗ್ಗೆ ಯುವತಿ ಕಾಲೇಜಿನಲ್ಲಿ ವಿಚಾರಿಸಿದಾಗ ಆತ ಕಾಲೇಜು ಸಿಬ್ಬಂದಿಯೇ ಅಲ್ಲ ಎಂಬುದು ಗೊತ್ತಾಗಿತ್ತು. ಸದ್ಯ ಆರೋಪಿಯನ್ನು ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

Exit mobile version