Site icon PowerTV

ಮಂತ್ರಿ ಸ್ಥಾನಕ್ಕೆ ಶಾಸಕರ ಇನ್ನಿಲ್ಲದ ಕಸರತ್ತು

ಕರ್ನಾಟಕ : ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಹೊತ್ತಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಮಂತ್ರಿ ಸ್ಥಾನಕ್ಕಾಗಿ ಶಾಸಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಸಿಡಿ ಕೇಸ್ ಸಂಕಷ್ಟಕ್ಕೆ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಈ ಬಾರಿ ಮತ್ತೆ ಸಂಪುಟ ಸೇರಲು ಕಸರತ್ತು ನಡೆಸಿದ್ದು, ಇದೀಗ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ, ತಮ್ಮ ರಾಜಕೀಯ ಗುರು ದೇವೇಂದ್ರ ಫಡ್ನವಿಸ್ ಮೂಲಕ ವರಿಷ್ಠರ ಮೇಲೆ ಒತ್ತಡ ತಂತ್ರ ಹೆಣೆಯಲು ಮುಂದಾಗಿದ್ದಾರೆ. ಈಗಾಗಲೇ ದೇವೇಂದ್ರ ಫಡ್ನವಿಸ್ ಗೋವಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವುದರಿಂದ ನಿನ್ನೆಯೇ ಗೋವಾಗೆ ತೆರಳಿರುವ ರಮೇಶ್ ಜಾರಕಿಹೊಳಿ, ಇಂದು ಖಾಸಗಿ ಹೋಟೆಲ್​​​ನಲ್ಲಿ ಫಡ್ನವಿಸ್ ಅವರನ್ನು ಭೇಟಿಯಾಗಿದ್ದಾರೆ.

Exit mobile version