Monday, September 1, 2025
HomeUncategorizedಜನತಾದಳದ ವಿರುದ್ಧ ಜೆಡಿಎಸ್​​​ ಮುಖಂಡ ದತ್ತಾ ಕೆಂಡಾಮಂಡಲ

ಜನತಾದಳದ ವಿರುದ್ಧ ಜೆಡಿಎಸ್​​​ ಮುಖಂಡ ದತ್ತಾ ಕೆಂಡಾಮಂಡಲ

ಬೆಂಗಳೂರು : ಜೆಡಿಎಸ್ ಪಕ್ಷದ ನಿಲುವಿನ ಬಗ್ಗೆ ಜನತಾದಳದ ಮುಖಂಡರಾದ ವೈ ಎಸ್ ವಿ ದತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಪಕ್ಷವು ಬಿಜೆಪಿ ವಿರುದ್ಧ ಹೆಚ್ಚು ಹೋರಾಟ ಮಾಡುತ್ತಿಲ್ಲ ಎಂದು ದತ್ತಾ ಅವರು ಬೇಸರವನ್ನು ಹೊರ ಹಾಕಿದ್ದಾರೆ. ಇದರಿಂದ ಜಾತ್ಯಾತೀತ ನಿಲುವು ಶಿಥಿಲವಾಗುತ್ತಿದೆ. ಯಾವುದೇ ಕಾರಣಕ್ಕೂ ಸಿದ್ಧಾಂತದಲ್ಲಿ ಬದಲಾವಣೆಯಾಗಬಾರದು. ನಾವು ಯಾಕೆ ಪ್ರಾದೇಶಿಕ ಪಕ್ಷದಲ್ಲಿ ದುಡಿಯುತ್ತಿದ್ದೇವೆ ? ಎಂದು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳೆರಡನ್ನೂ ಸಮಾನ ದೂರದಲ್ಲಿ ಇಡಬೇಕು, ಆ ಮೂಲಕ ಜಾತ್ಯಾತೀತ ನಿಲುವಿಗೆ ಬದ್ಧವಾಗಿರಬೇಕು. ಜೆಡಿಎಸ್ ಪಕ್ಷವು ಬಿಜೆಪಿ ವಿರುದ್ಧ ಸ್ಪಷ್ಟವಾಗಿ ಹೋರಾಟ ಮಾಡುತ್ತಿಲ್ಲ ಎಂಬ ಭಾವನೆ ಮೂಡುತ್ತಿದೆ. ಇದನ್ನ ಪಕ್ಷದ ವೇದಿಕೆಯಲ್ಲಿ ನಾನು ಚರ್ಚಿಸಿದ್ದೇನೆ ಮತ್ತು ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಸ್ಪಷ್ಟ ನಿಲುವು ಇರಬೇಕು ಎಂದು ಅಸಮಾಧಾನವನ್ನು ತೋರಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments