Friday, August 29, 2025
HomeUncategorizedಯೋಗಿಗೆ ಪಿಣರಾಯಿ ತಿರುಗೇಟು

ಯೋಗಿಗೆ ಪಿಣರಾಯಿ ತಿರುಗೇಟು

ಕೇರಳ: ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು ಎಂದು ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಇತರೆ ಪಕ್ಷದ ಮುಖಂಡರು ಟೀಕಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಯಪಡುವಂತೆ ಉತ್ತರಪ್ರದೇಶವು ಕೇರಳವಾಗಿ ಬದಲಾದರೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವಾಗಿ ಬದಲಾಗುತ್ತದೆ. ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆಗಳು, ಸಮಾಜ ಕಲ್ಯಾಣ, ಉತ್ತಮ ಜೀವನಮಟ್ಟ ದೊರೆಯುತ್ತಿದೆ ಎಂದು ತೀರುಗೇಟು ನೀಡಿದರು.

RELATED ARTICLES
- Advertisment -
Google search engine

Most Popular

Recent Comments