Site icon PowerTV

ಹಿಜಾಬ್​ ವಿವಾದ , ಸುಪ್ರೀಂ ಕೋರ್ಟ್​ ನಕಾರ..!

ಹಿಜಾಬ್​​​ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​​ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸೂಕ್ತ ಸಮಯದಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನು ರಾಷ್ಟ್ರೀಯ ಮಟ್ಟದ ವಿಷಯವನ್ನಾಗಿ ಮಾಡಬೇಡಿ, ಸೂಕ್ತ ಸಮಯದಲ್ಲಿ ನಾವು ಮಧ್ಯಪ್ರವೇಶ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಸೂಚಿಸಿದೆ.

Exit mobile version