Site icon PowerTV

ಪರೋಕ್ಷವಾಗಿ ಯತ್ನಾಳ್​​ಗೆ ಟಾಂಗ್ ನೀಡಿದ ಸಚಿವ ನಿರಾಣಿ

ಕಲಬುರಗಿ :ಪಂಚಮಸಾಲಿ ಸಮಾಜದ ಮೂರನೇ ಪೀಠದ ಬಗ್ಗೆ ಮಾತನಾಡೋರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಪೀಠ ಯಾರ ವಿರುದ್ಧವಾಗಿ ಪ್ರಾರಂಭವಾಗ್ತಿಲ್ಲ. ನಿರಾಣಿ ಹಿತಾಸಕ್ತಿಗೆ ಮೂರನೇ ಪೀಠ ಸ್ಥಾಪನೆ ಅನ್ನೋದು ಸತ್ಯಕ್ಕೆ ದೂರವಾದ ಸಂಗತಿ. ಎರಡನೇ ಪೀಠ ಏಕೆ ಹುಟ್ಟಿತು ಅನ್ನೋ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು. ಮೂರನೇ ಪೀಠಾರೋಹಣದ ಸಿದ್ಧತೆ ನಡೆದಿದ್ದು ಈ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು, ರಾಜಕೀಯ ಗಣ್ಯರು ಆಗಮಿಸುವ ನಿರೀಕ್ಷೆ ಇದೆ. ಕೂಡಲಸಂಗಮ ಪೀಠದ ಸ್ವಾಮೀಜಿಗಳಿಗೂ ಕೂಡಾ ಆಹ್ವಾನ ನೀಡಲಾಗಿದೆ. ಆದರೆ, ಅವರ ಆಗಮನದ ಬಗ್ಗೆ ಖಚಿತವಾಗಿಲ್ಲ ಎಂದು ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.

Exit mobile version